

ಶಂಕರನಾರಾಯಣದ ಮದರ್ ತೆರೇಸಾ’ಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 101ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 99.01 ಫಲಿತಾಂಶ ಪಡೆದಿರುತ್ತಾರೆ ಕುಮಾರಿ ಅಕ್ಷಿತಾ 590 (ಶೇ. 98.3) ಅಂಕಗಳಿಸಿ ರಾಜ್ಯಮಟ್ಟದಲ್ಲಿ *10 ನೇ ರ್ಯಾಂಕ್ ಪಡೆದಿರುತ್ತಾರೆ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 52 ವಿದ್ಯಾರ್ಥಿಗಳು
ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ವಾಣಿಜ್ಯ ವಿಭಾಗದಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡ 100 ಫಲಿತಾಂಶ ದಾಖಲಿಸಿರುತ್ತಾರೆ ನಿಶಾ ನಾರಾಯಣ್ ತೋಳಾರ್ 593 (ಶೇ. 98.83) ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ *7 ನೇ ರ್ಯಾಂಕ್ ಪಡೆದಿರುತ್ತಾರೆ 43 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 27 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಜೈಸನ್ ಲೂವಿಸ್ ಅವರು ತಿಳಿಸಿರುತ್ತಾರೆ.
