JANANUDI.COM NETWORK
ಯು.ಎ.ಇ.ಯ ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಇಂದು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದ ಸುದ್ದಿಯನ್ನು ನಿಧನವನ್ನು ಯುಎಇ ವ್ಯವಹಾರಗಳ ಸಚಿವಾಲಯ ಧೃಡಪಡಿಸಿದೆ.
ಶೇಖ್ ಖಲೀಫಾ ಅವರು ಯುಎಇಯ ಎರಡನೇ ಅಧ್ಯಕ್ಷರಾಗಿದ್ದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಶೇಖ್ ಬಿನ್ ಝಾಯೆದ್ ನಿಧನದ ಹಿನ್ನೆಲೆಯ ಯುಎಇಯಲ್ಲಿ ಮೂರು ದಿನಗಳ ಅಧಿಕೃತ ಶೋಕಾಚರಣೆಯನ್ನು ಘೋಷಿಸಲಾಗಿದೆ. ಯುಎಇಯ ಏಳಿಗೆಗಾಗಿ ಅವರು ಮಹತ್ತರ ಕೊಡುಗೆಯನ್ನು ನೀಡಿದ್ದರು. ಯುಎಇಯನ್ನು ಮಹತ್ತರ ಬದಲಾವಣೆಗಾಗಿ ಶ್ರಮಿಸಿದ್ದರು.
ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಯುಎಇ ಮತ್ತು ಇಸ್ಲಾಮಿಕ್ ಪ್ರಪಂಚದ ಜನರಿಗೆ ಸಂತಾಪ ವ್ಯಕ್ತಪಡಿಸುತ್ತದೆ. ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದ ಬಗ್ಗೆ.ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು 40 ದಿನಗಳ ಶೋಕಾಚರಣೆಯ ಅವಧಿಯನ್ನು ಘೋಷಿಸಿದೇ ಸಚಿವಾಲಯಗಳು, ಇಲಾಖೆಗಳು, ಫೆಡರಲ್ ಮತ್ತು ಸ್ಥಳೀಯ ಸಂಸ್ಥೆಗಳು ಮತ್ತು ಖಾಸಗಿ ವಲಯದಲ್ಲಿನ ಎಲ್ಲಾ ಕೆಲಸಗಳನ್ನು ನಿಲ್ಲಿಸಿ, ಅಧಿಕಾರಿಗಳು ಶುಕ್ರವಾರದಿಂದ ಧ್ವಜಗಳನ್ನು ಅರ್ಧಕ್ಕೆ ಇಳಿಸಿ 3 ದಿನಗಳ ಕಾಲ ಸ್ಥಗಿತಗೊಳಿಸಿದ್ದಾರೆ.