

ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಮೃತಪಟ್ಟ ದುರ್ವೈವಿ.
ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ನಿಲ್ಲಿಸಿದ್ದ ಶೋಭಾ ಕರಂದ್ಲಾಜೆ ಅವರ ಕಾರಿನ ಬಾಗಿಲು ಸಡನ್ ಆಗಿ ತೆರೆದು ಈ ದುರ್ಘಟನೆ ನಡೆದಿದೆ. ಕಾರಿನ ಡೋರ್ ತೆಗೆದಾಗ ಹಿಂಬಂದಿಯಿಂದ ಬಂದಿದ್ದ ಬೈಕ್ ಸವಾರ ಕಾರಿನ ಡೋರ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಅವರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರಂ ಸಮೀಪ ದುರ್ಘಟನೆ ನಡೆದಿದ್ದು, ಕೆ.ಆರ್.ಪುರಂ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.