ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಆಶಾ ಕಾರ್ಯಕರ್ತೆಯರು ಕಿವಿ ಆರೋಗ್ಯ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಕಿವಿ, ಮೂಗು ಹಾಗೂ ಗಂಟಲು ತಜ್ಞೆ ಡಾ. ಪುಷ್ಪಲತಾ ಹೇಳಿದರು.
ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನಾ ಯೋಜನೆಯಡಿ ಬುಧವಾರ ಆಶಾ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಿವಿ ಮಾನವನ ಒಂದು ಪ್ರಮುಖ ಅಂಗ. ಶ್ರವಣ ದೋಷ ಇದ್ದಲ್ಲಿ ಹಲವು ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಪೋಷಕರು ಈ ಶ್ರವಣ ದೋಷ ನಿವಾರಣೆಗೆ ಕ್ರಮ ಕೈಗೊಳ್ಳುವುದು ಅಪರೂಪ. ಆಶಾ ಕಾರ್ಯಕರ್ತೆಯರು ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದನ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ. ವಿಜಯ ಇದ್ದರು.