

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರ ವಿಜಯಕರ್ನಾಟಕ ವರದಿಗಾರ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಹೃದಯಘಾತದಿಂದ ನಿಧಾನರಾಗಿದ್ದು, ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕ್ರೀಯಾಶೀಲ ವರದಿಗಾರರಾಗಿದ್ದ ನಾಗೇಶ್ ಗಾಣಿಗ ಅವರ ಸೇವೆಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಶ್ಲಾಘಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

