

ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಎರಡನೇ ಭಾರಿ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಎಂಟು ಶಾಸಕರು ಸಚಿವ ಸ್ಥಾನ ಪಡೆದವರು ಕಿಕ್ಕಿರಿದ ಜನರ ಮುಂದೆ ಪ್ರಮಾಣವಚನ ಸ್ವೀಕರಿಸಿದರು
ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಜನಸಾಗರದ ಹರ್ಷೋದ್ಗಾರಗಳ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಪದ ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
ಹತ್ತು ವರ್ಷಗಳ ನಂತರ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಈ ಹಿಂದೆ ಇದೇ ವೇದಿಕೆಯಲ್ಲಿಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಇಬ್ಬರು ನಾಯಕರೂ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಿದ್ದರಾಮಯ್ಯ ಅವರು ಈ ಸಲ ದೇವರ ಹೆಸರಿನಲ್ಲಿ ಹಾಗೂ ಡಿ.ಕೋಟೆ ಶಿವಕುಮಾರ್ ಅವರು ನೊಣವಿನಕೆರೆಯ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಶಾಸಕರಾಗಿ ಆಯ್ಕೆಯಾಗಿರುವ ಡಾ.ಜಿ.ಪರಮೇಶ್ವರ್, ಕೆ. ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಹಾಗೂ ಜಮೀರ್ ಅಹ್ಮದ್ ಖಾನ್ ಅವರೂ ಕೂಡಾ ಇದೇ ಸಂದರ್ಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

















