

ಕುಂದಾಪುರ; ಸಂತ ಜೋಸೆಫ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಪ್ರೇಮಿಕಾ ಇವರಿಗೆ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರ ನಿಷ್ಠಾವಂತ ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲೆ ಮತ್ತು ಆದರ್ಶ ಆಸ್ಪತ್ರೆಯವರ ಸಹಯೋಗದಲ್ಲಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಇದಾಗಿರುತ್ತದೆ. ಭಗಿನಿ ಶಿಕ್ಷಕಿ ಪ್ರೇಮಿಕಾ ಇವರನ್ನು ರೋಜರಿ ಮಾತಾ ಚರ್ಚಿನ ಧರ್ಮಗುರು ಅ।ವಂ। ಪೌಲ್ ರೇಗೊ, ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಭಗಿನಿ ಸುಪ್ರಿಯಾ, ಶಾಲಾ ಆಡಳಿತ ಆಡಳಿತ ಮಂಡಳಿ, ಶಿಕ್ಷಕ ಮತ್ತು ಶಿಕ್ಷಕೆತರವರ್ಗ, ಹಾಗೂ ವಿದ್ಯಾರ್ಥಿಗಳು ಪ್ರಶಂಸಿಸಿ, ಶುಭಕೋರಿರುತ್ತಾರೆ.




