ಹಾಸನ ಲೋಕಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದೆನ್ನಲಾದ ಆಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿಯಾದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಬಂಧನ ಭೀತಿಯಿಂದ ತಮ್ಮ ಹೊಳೆನರಸೀಪುರ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆ ನೀಡಿದ ದೂರಿನ ಹಿನ್ನೆಲೆಯಲ್ಲಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರೇವಣ್ಣ ಅವರು ಎ1 ಮತ್ತು ಪ್ರಜ್ವಲ್ ಅವರು ಎ2 ಆರೋಪಿಯಾಗಿದ್ದಾರೆ. ಮಾನಸಿಕ ಹಾಗೂ ದೈಹಿಕವಾಗಿ ಜೀವ ಭಯ ಇರುವುದರಿಂದ ದೂರು ದಾಖಲಿಸಲು ವಿಳಂಬವಾಗಿದೆ ಎಂದು ಸಂತ್ರಸ್ತ ಮಹಿಳೆ ತಿಳಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರು ಏಪ್ರಿಲ್ 26ರಂದು ಮತದಾನ ಮುಗಿದರೆ ಮಾರನೇ ದಿನ ಏಪ್ರಿಲ್ 27ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಜಾನೆ ಜರ್ಮನಿಗೆ ತೆರಳಿದ್ದರು.