ಶಿಕ್ಷಕರು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಗಮನ ನೀಡಬೇಕು ; ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಶಿಕ್ಷಕರು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಗಮನ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸರ್ಕಾರಿ ಶಾಲಾ ಕಾಲೇಜುಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿ, ಶಾಲಾ ಮುಖ್ಯಸ್ಥರು ಯಾವುದೇ ಕಾರಣಕ್ಕೂ ಮಕ್ಕಳು ಮೂಲ ಸೌಕರ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ, ಪ್ರಯೋಗಾಲಯ, ತರಗತಿ ಕೊಠಟಿ ಹಾಗೂ ಶಿಕ್ಷಕರ ಕೊಠಡಿ ಹೊಂದಿರಬೇಕು ಎಂದು ಹೇಳಿದರು.
ಖಾಸಗಿ ಶಾಲೆಗೆ ಸೇರಿಸಲಾಗದ ಬಡ ಕುಟುಂಬಗಳ ವಿದ್ಯಾರ್ಥಿಗಳು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿದ್ದಾರೆ. ಖಾಸಗಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳನ್ನು ಕಂಡು ಕೀಳರಿಮೆ ಹೊಂದಂತೆ ಶೈಕ್ಷಣಿಕವಾಗಿ ಮುಂದೆ ತರಬೇಕು. ಮಕ್ಕಳು, ತಾವು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೆಂದು ಹೆಮ್ಮೆಯಿಂದ ಹೇಳಿಕೊಳ್ಳುವಂತೆ ಅವರ ಕಲಿಕೆ ಹಾಗೂ ಫಲಿತಾಂಶ ಇರಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಬಿಆರ್‍ಸಿ ಕೆ.ಸಿ.ವಸಂತ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ನಿರ್ದೇಶಕರಾದ ಎಂ.ಬೈರೇಗೌಡ, ಸಿ.ಎನ್.ಚಂದ್ರಪ್ಪ, ಅಶೋಕ್, ಸಿ.ಎಂ.ವೆಂಕಟರವಣಪ್ಪ, ಕಲಾಶಂಕರ್, ಜಿ.ಎಂ.ಗೋವಿಂದರೆಡ್ಡಿ ಇದ್ದರು
.