

ಶಿರ್ವ: ಇಂದಿನ ವಿವಿಧ ಕ್ಷೇತ್ರಗಳಲ್ಲಿ ದತ್ತಾಂಶ ಸಮಸ್ಯೆಗಳನ್ನು,ಪರಿಹರಿಸಲು ಡೇಟಾ ವಿಜ್ಞಾನವನ್ನು ಬಳಸುವ ಮೂಲಕ ದತ್ತಾಂಶ ಗಣಿಗಾರಿಕೆ, ಯಂತ್ರ ಕಲಿಕೆ ಮತ್ತು ಅಂಕಿಅಂಶಗಳ ವಿಶ್ಲೇಷಣೆಯ ಸಂಯೋಜನೆಯಾಗಿದೆ. ಯುವಕರು ಇಂತಹ ಡೇಟಾ ವಿಜ್ಞಾನದ ಕೌಶಲ್ಯಗಳನ್ನು ಕಲಿಯುವ ಮೂಲಕ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳಿಗೆ ಉತ್ತಮ ನಿರ್ಧಾರಗಳನ್ನು ನೀಡುವ ಮೂಲಕ ಉತ್ತಮ ಉಪಾದಿಗಳನ್ನು ಪಡೆಯಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಏರ್ಪಡಿಸಿದ ಡಿಜಿಟಲ್ ಟೆಕ್ನಾಲಜಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ,ಡೇಟಾ ಸೈನ್ಸ್ ಮತ್ತು ಉದ್ಯೋಗ ಅವಕಾಶಗಳು ಎಂಬ ವಿಶೇಷ ಉಪನ್ಯಾಸದಲ್ಲಿ ಮಂಗಳೂರಿನ ಕಾಗ್ನೆಟಿವ್ ಸೊಲ್ಯೂಷನ್ಸ್ ನ ಅಸಿಸ್ಟೆಂಟ್ ಹೆಚ್ ಆರ್ ಲೀಡರ್ಟೀಮ್ ಕುಮಾರಿ ಕೃತಿಕಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು ಪ್ರಸ್ತುತ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ತ್ವರಿತ ಬದಲಾವಣೆಗಳಿಂದಾಗಿ ಕಂಪ್ಯೂಟರ್ ಪದವೀಧರರಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನದಲ್ಲೇ ಉದ್ಯಮ ಕೌಶಲ್ಯಗಳನ್ನು ಕಲಿಯುವ ಮೂಲಕ ಉದ್ಯಮದ ಸವಾಲುಗಳನ್ನು ತೆಗೆದುಕೊಳ್ಳಲು ಸಿದ್ದರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ಹೇಳಿದರು.








