ಕುಂದಾಪುರ: ಅಕ್ಟೋಬರ್ 18 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆಯ ಆಶ್ರಯದಲ್ಲಿ ” ಸ್ವಯಂ ಕಾಳಜಿ ಮತ್ತು ಸ್ವಚ್ಛತೆ ” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಆಯುಷ್ ಧಾಮ ಆಸ್ಪತ್ರೆಯ ವ್ಯವಸ್ಥಾಪಕರಾದ ಡಾ.ಸೋನಿ ಡಿಕೊಸ್ತಾ ಮಾತನಾಡಿ ಮೊದಲು ಆಧ್ಯಾತ್ಮಿಕ ನೆಲೆಯಲ್ಲಿ ಸ್ವಯಂ ಕಾಳಜಿ ಮಾಡಬೇಕು. ಅಂದರೆ ಸಕಾರಾತ್ಮಕ ಆಲೋಚನೆ ಮತ್ತು ಮನಸ್ಥಿತಿಯನ್ನು ರೂಡಿಸಿಕೊಳ್ಳಬೇಕು. ತುಂಬಾ ಭಾವನಾತ್ಮಕತೆಗೆ ಒಳಗಾಗದೆ ಮಾನಸಿಕವಾಗಿ ಗಟ್ಟಿತನ ಬೆಳೆಸಿಕೊಳ್ಳಬೇಕು. ಜೊತೆಗೆ ದೈಹಿಕ ಸ್ವಾಸ್ಥ್ಯ ಮತ್ತು ಸ್ವಚ್ಛತೆಯನ್ನು ಅರಿತು ನಿಮ್ಮ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ
ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಮಹಿಳಾ ವೇದಿಕೆಯ ಸಂಚಾಲಕರಾದ ಮೀನಾಕ್ಷಿ ಎನ್.ಎಸ್. ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಅಫ್ರಾ ಕಾರ್ಯಕ್ರಮ ನಿರೂಪಿಸಿದರು. ಓಜಸ್ವಿನಿ ಪರಿಚಯಿಸಿದರು . ಸ್ಪೂರ್ತಿ ಸ್ವಾಗತಿಸಿದರು. ಪ್ರೀತಿಕಾ ವಂದಿಸಿದರು. ಶ್ವೇತಾ ಮತ್ತು ರಕ್ಷಿತಾ ಪ್ರಾರ್ಥನೆ ಮಾಡಿದರು.