

ಶಿವಮೊಗ್ಗ, ಜೂ.6; ಹುಲಿಕಲ್ ಘಾಟಿಯ ಬಾಳೆಬರೇ ಫಾಲ್ಸ್ ಸಮೀಪ ಶ್ರೀ ದುರ್ಗಾಂಬ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬೆಂಕಿಗೆ ಆಹುತಿಯಾಗಿದ ಘಟನೆ ಇಂದು ಶನಿವಾರ ನಡೆದಿದೆ.
ಕುಂದಾಪುರದತ್ತ ತೆರಳುತ್ತಿದ್ದ ವೇಳೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಹಾಗೂ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬ್ಲ್ಲಾಸ್ಸಿನಲ್ಲಿದ್ದ 17 ಪ್ರಯಾಣಿಕರನ್ನು ತಕ್ಷಣ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಬಸ್ ಬಹುತೇಕ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

