

ಶ್ರೀನಿವಾಸಪುರ: ಕೊಲೆಯಾದ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಅವರ ಪಾಥೀವ ಶರೀರದ ಮೆರವಣಿಗೆ ಏರ್ಪಡಿಸಲಾಗಿತ್ತು.

ಮೆರವಣಿಗೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮೃತ ಶ್ರೀನಿವಾಸ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದ್ದ ವಾಹನ, ಎಂಜಿ ರಸ್ತೆ ಹಾಗೂ ಮುಳಬಾಗಿಲು ರಸ್ತೆ ಮೂಲಕ ಮೃತರ ತೋಟಕ್ಕೆ ಸಾಗಿತು. ರಸ್ತೆ ಪಕ್ಕದ ಮೃತರ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಎಂ.ಶ್ರೀನಿವಾಸನ್ ಅವರ ಪತ್ನಿ ಡಾ. ಚಂದ್ರಕಳಾ, ಪುತ್ರ ಡಾ.ಕಿಷನ್, ಪುತ್ರಿ ಡಾ. ನಿಖಿತಾ, ಅಳಿಯ ಭಾಸ್ಕರ್ ಮತ್ತು ಸಂಬಂಧಿಕರು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು. ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.
ಅಂತಿಮ ದರ್ಶನ: ಶ್ರೀನಿವಾಸಪುರದಲ್ಲಿ ಮೃತರ ಮನೆಗೆ ಭೇಟಿ ನೀಡಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಎಸ್.ಎನ್.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ನಾಗೇಶ್, ಬಿ.ಪಿ.ವೆಂಕಟಮುನಿಯಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್.ಬಿ.ಮುನಿವೆಂಕಟಪ್ಪ, ತೂಪಲ್ಲಿ ಆರ್.ನಾರಾಯಣಸ್ವಾಮಿ, ಮುಖಂಡರಾದ ಕೆ.ಕೆ.ಮಂಜು, ರವಿ, ಎಸ್‍ಎಲ್‍ಎನ್ ಮಂಜುನಾಥ್, ಬಕ್ಷು ಸಾಬ್, ದಲಿತ ಮುಖಂಡರಾದ ಎನ್.ಮುನಿಸ್ವಾಮಿ, ಪಂಡಿತ್ ಮುನಿವೆಂಕಟಪ್ಪ ಮತ್ತಿತರರು ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.