

ಶ್ರೀನಿವಾಸಪುರ ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ರವರು ಭೇಟಿ ನೀಡಿ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಅಭಿಲೇಖಾಲಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ್ದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎನ್. ಸುದೀಂದ್ರ, ಪುರಸಭೆಯ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಕಸಬಾ ರಾಜಸ್ವ ನಿರೀಕ್ಷಕರು ಮುನಿರೆಡ್ಡಿ ಹಾಗೂ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.

