ಶ್ರೀನಿವಾಸಪುರ : ಸರ್ಕಾರ ಯೋಜನೆಗಳನ್ನು ಸಮಾಜ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆ ಮಾಡಬೇಕೆಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸೋಮವಾರ ಅಂಬೇಡ್ಕರ್ ಭವನ ,ವಾಲ್ಮೀಕಿ ಭವನಗಳ ಭೂಮಿ ಪೂಜೆ ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.
2 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು. ಹಾಗು ತಾಲೂಕಿನಾದ್ಯಾಂತ 1ಕೋಟಿ 9.5 ಲಕ್ಷ ವೆಚ್ಚದಲ್ಲಿ 10 ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ, 8.5ಲಕ್ಷ ವೆಚ್ಚದಲ್ಲಿ 8 ವಾಲ್ಮೀಕಿ ಭವನಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ, ತಾಲೂಕಿನ 16 ಶಾಲೆಗಳ ನೂತನ ಕಟ್ಟಡಗಳ ಶಂಕುಸ್ಥಾಪನೆ, ಅಂಗನವಾಡಿ ಕಟ್ಟಡಗಳ ಶಂಕುಸ್ಥಾನೆ , ವಿವಿಧ ಇಲಾಖೆಗಳಿಂದ ಆಯ್ಕೆ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಹಾಗು ಚೆಕ್ಗಳ ವಿತರಣೆ ಹಾಗೂ ಇತರೆ ಕಾಮಾಗಾರಿಗಳ ಉದ್ಗಾಟನೆಗಳನ್ನು ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಸಭೆಗೆ ಹೆಚ್ಚು ಸಾರ್ವಜನಿಕರು ಸೇರುವುದಕ್ಕೆ ಗ್ರಾ.ಪಂ.ಪಿಡಿಒಗಳು, ವಿವಿಧ ಇಲಾಖೆಗಳ ಅಧಿಕಾರಿ ವ್ಯವಸ್ಥೆ ಮಾಡಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖಾಧಿಕಾರಿಗಳು ಕಾಳಜಿ ವಹಿಸಬೇಕೆಂದರು.
ತಹಶೀಲ್ದಾರ್ ಜಿ.ಎನ್.ಸುದೀಂದ್ರ ಮಾತನಾಡಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಸಂಬಂದಿಸಿದ ಮಳಿಗೆಗಳನ್ನು ತೆರೆದು, ಇಲಾಖೆಯಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದುರು. ಸರ್ಕಾರ ಐದು ಗ್ಯಾರಂಟಿಗಳಿಗೆ ಸಂಬಂದಿದ ಇಲಾಖೆಗಳು ಸಾರ್ವಜನಿಕರ ಕೊರತೆ ನಿವಾರಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಟ್ಟು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಲು ಸಹಕರಿಸಿ ಎಂದರು.