ಶ್ರೀನಿವಾಸಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಕಾರ್ಯಕ್ರಮವನ್ನು ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಹೆಚ್.ಆರ್.ಸಚಿನ್ ರವರು, ತಹಶೀಲ್ದಾರ್ ಶ್ರೀ ಜಿ.ಎನ್.ಸುಧೀದ್ರರವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶಿವಕುಮಾರಿ, ಪುರಸಭಾ ಮುಖ್ಯಾಧಿಕಾರಿ ಶ್ರೀ ವಿ.ನಾಗರಾಜು, ವಕೀಲರ ಸಂಘದ ಅಧ್ಯಕ್ಷ ಶ್ರೀ ಎನ್.ವಿ.ಜಯರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಮುನಿ ಲಕ್ಷ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಅಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣರವರು ಇಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.