ಶ್ರೀನಿವಾಸಪುರ : ಪಾದಚಾರಿಗಳಿಗೆ ಪಾದವಿಡುವ ಬಾಗ್ಯವನ್ನು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಅಧಿಕಾರಿಗಳು ಅನುವುಮಾಡಿಕೊಟ್ಟಿದ್ದಾರೆ.
ಶ್ರೀನಿವಾಸಪುರ ಪಟ್ಟಣದ ಮುಖ್ಯ ರಸ್ತೆಯಾದ ಎಂ ಜಿ ರಸ್ತೆಯಲ್ಲಿ ಸುಮಾರು ವರ್ಷಗಳಿಂದ ಅಕ್ರಮವಾಗಿ ಯಾವುದೇ ಪರವಾನಗೆ ಪಡೆಯದೇ ನಿರ್ಮಿಸಿಕೊಂಡಿದ್ದ ಪೆಟ್ಟಿಗೆ ಅಂಗಡಿಗಳನ್ನು ತಾಲ್ಲೂಕು ದಂಡಾಧಿಕಾರಿ ಹಾಗೂ ಪುರಸಭೆ ಮುಖ್ಯಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ತೆರವುಗೊಳಿಸಿದ್ದಾರೆ. ಸರ್ಕಾರ ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಹಾಗೂ ಪಾದಚಾರಿಗಳಿಗೆ ಸಂಚರಿಸಲು ಒಂದಿಷ್ಟು ಸ್ಥಳ ಮೀಸಲಿಟ್ಟಿದ್ದು ತಾಲ್ಲೂಕು ಆಡಳಿತ ಮತ್ತು ಪುರಸಭೆ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೇ ತಮ್ಮಷ್ಟಕ್ಕೆ ತಾವೇ ಪೆಟ್ಟಿಗೆ ಅಂಗಡಿಗಳನ್ನು ನಿರ್ಮಿಸಿಕೊಂಡು ಪಾದಚಾರಿಗಳಿಗೆ ಆಡ್ಡಗಾಲಾಗಿ ವಹಿವಾಟು ನಡೆಸುತ್ತಿದ್ದರು. ಇಲ್ಲಿ ವಹಿವಾಟು ನಡೆಸುವ ಕೆಲವರು ಪುರಸಭೆಯಿಂದ ಬೀದಿ ಬದಿ ವ್ಯಾಪಾರಸ್ಥರು ಎಂದು ಪರವಾನಗೆ ಪಡೆದು ಬೀದಿ ಬದಿ ವ್ಯಾಪಾರ ಮಾಡದೆ ನೇರವಾಗಿ ಪೆಟ್ಟಿಗೆ ಅಂಗಡಿ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಈ ಬಗ್ಗೆ ಹಲವು ಭಾರಿ ತಾವೇ ತೆರವು ಮಾಡಿಕೊಳ್ಳಲು ಅಧಿಕಾರಿಗಳು ಸೂಚಿಸಿದ್ದರು. ಆದ್ರೆ ಅಧಿಕಾರಿಗಳ ಮಾತಿಗೆ ಕಿಮ್ಮತ್ತು ನೀಡದ ಹಿನ್ನೆಲೆ ತಾಲ್ಲೂಕು ದಂಡಾಧಿಕಾರಿ ಸುದೀoದ್ರ ಮತ್ತು ಪುರಸಭಾ ಮುಖ್ಯಧಿಕಾರಿ ಸತ್ಯನಾರಾಯಣ ರವರುಗಳ ಜಂಟಿ ಕಾರ್ಯಚರಣೆಯಲ್ಲಿ ಅಡ್ದಗಾಲಾಗಿ ಬೀದಿ ಬದಿ ಹಾಗೂ ಚರಂಡಿಗಳ ಮೇಲೆ ನಿರ್ಮಿಸಿಕೊಂಡಿದ್ದ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಪಾದಚಾರಿಗಳಿಗೆ ಪಾದವಿಡುವ ಭಾಗ್ಯ ಕಲ್ಪಿಸಿದ್ದಾರೆ.
ಈ ವೇಳೆ ಹಲವು ಬೀದಿ ಬದಿ ಪೆಟ್ಟಿಗೆ ಅಂಗಡಿ ನಿರ್ಮಿಸಿಕೊಂಡಿದ್ದ ಪಲಾನುಭವಿಗಳು ತೆರವನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದು ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟು ಮಾಡುತ್ತಿರುವ ಅಕ್ರಮ ಅಂಗಡಿ ಮಳಿಗೆಗಳನ್ನು ತೆರವುಗೊಳಿಸುವಲ್ಲಿ ಯಾವುದೇ ರಾಜಿ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟವಾಗಿ ಹೇಳಿ ಉಳಿದ ಅಂಗಡಿ ಮಳಿಗೆಗಳನ್ನು ತಾವೇ ತೆರವು ಮಾಡಿಕೊಳ್ಳಲು 4 ದಿನಗಳ ಕಾಲ ಅವಕಾಶ ಕಲ್ಪಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎಂಬಿ ಗೊರವಣ ಕೊಳ್ಳ, ಸಬ್ ಇನ್ಸ್ಪೆಕ್ಟರ್ ಜಯರಾಮ್, ವ್ಯಸ್ಥಾಪಕ ನವೀನ್ ಚಂದ್ರ, ಕಂದಾಯ ಅಧಿಕಾರಿ ವಿ ನಾಗರಾಜ್, ಕಂದಾಯ ನಿರೀಕ್ಷಕ ಎನ್. ಶಂಕರ್, ಆರೋಗ್ಯ ನಿರೀಕ್ಷಕ ಕೆ. ಜಿ. ರಮೇಶ್ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.