

ಶ್ರೀನಿವಾಸಪುರ: ರೋಣೂರು ಗ್ರಾಮದ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯಕ್ಕೆ ಮಂಗಳವಾರ ದ್ವಾದಶಿ ಪ್ರಯಕ್ತ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ತಾಲ್ಲೂಕು ಘಟಕದ ಅಧ್ಯಕ್ಷ ಎ.ಅಶೋಕರೆಡ್ಡಿ, ಮುಖಂಡರಾದ ರೋಣೂರು ಚಂದ್ರಶೇಖರ್ ಇದ್ದರು.
ದೇವಾಲಯದ ಆವರಣದಲ್ಲಿ ಸಂಗೀತ ಕಲಾವಿದೆ ಮಾಯಾ ಬಾಲಚಂದ್ರ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಗೀತ ಕಲಾವಿದರಾದ ಕೆ.ನರಸಿಂಹಮೂರ್ತಿ ಹಾಗೂ ಬಾನುತೇಜ ಅವರಿಂದ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ತಾಲ್ಲೂಕಿನ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.