

ಶ್ರೀನಿವಾಸಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ವತಿಯಿಂದ ತಾಲೂಕಿನ ರಾಯಲ್ಪಾಡ್ ಗ್ರಾಮದ ಕೆನರಾ ಬ್ಯಾಂಕ್ ಮುಂಭಾಗ ಮಂಗ:ವಾರ ರಾಯಲ್ಪಾಡು ವಲಯಕ್ಕೆ ಸಂಬಂದಿಸಿದಂತೆ ಶ್ರೀ ಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಿ.ವಿ.ಶಿವಾರೆಡ್ಡಿ ಯವರು ಉದ್ಘಾಟಕರ ಮಾತನ್ನ ಮಾತನಾಡುತ್ತ ಕ್ಷೇತ್ರ ದ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಬಗ್ಗೆ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಕೋಲಾರ ಜಿಲ್ಲೆಯ ಜಿಲ್ಲಾ ನಿರ್ದೇಶಕ ಶ್ರೀ ಶಿವಾನಂದ ಆಚಾರ್ಯ ಸರ್ ರವರು ಯೋಜನೆಯ ಕಾರ್ಯಕ್ರಮದ ಬಗ್ಗೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೋಲಾರ ಜಿಲ್ಲೆ ಗೆ ನೀಡಿದ ಅನುದಾನ ಮತ್ತು ಕೊಡುಗೆಯ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.
ಶ್ರೀ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರಿಗಳು ಧರ್ಮಸ್ಥಳದ ಜನಪರ ಕಾರ್ಯಕ್ರಮಗಳ ಬಗ್ಗೆ ಲಕ್ಷ್ಮಿ ಪೂಜೆಯ ಮಹತ್ವದ ಬಗ್ಗೆ, ಧಾರ್ಮಿಕ ಆಚರಣೆಗಳ ಹಿಂದೆ ಇರುವ ವೈಜ್ಞಾನಿಕ ಮಹತ್ವದ ಬಗ್ಗೆ ಆಶೀರ್ವಚನ ನೀಡಿದರು.
ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ನರೇಂದ್ರಬಾಬು ಅವರು ಅಧ್ಯಕ್ಷೀಯ ಭಾಷಣ ಮಾಡುತ್ತಾ ಗ್ರಾಮಗಳ ಅಭಿವೃದ್ಧಿ ಕಾರ್ಯವನ್ನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಾ ಬರುತ್ತಿದೆ ಇಂತಹ ಕಾರ್ಯಕ್ರಮಕ್ಕೆ ನಾವೆಲ್ಲರೂ ಸಹಕಾರ ನೀಡಬೇಕೆಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

