ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಡಿ.9 ರಂದು ಏರ್ಪಡಿಸಿರುವ 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯ ಸಾಹಿತ್ಯ ಪ್ರೇಮಿಗಳು ಭಾಗವಹಿಸುವುದರ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಮನವಿ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣದ ಬಳಿಕ, ಗ್ರಾಮದಲ್ಲಿ ಸಮ್ಮೇಳನಾಧ್ಯಕ್ಷ ಸಾಹಿತಿ ಪಾತಮುತ್ತಕಪಲ್ಲಿ ಎಂ.ಚಲಪತಿಗೌಡ ಅವರ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ಹೇಳಿದು.
ಸಮ್ಮೇಳನದ ಉದ್ಘಾಟನೆ ಬಳಿಕ ವಿಚಾರ ಗೋಷ್ಠಿ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೆ 4.30 ಕ್ಕೆ ಸಮಾರೋಪ, ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ಸಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪಿ.ಎಸ್.ಮಂಜುಳ ಮಾತನಾಡಿ, ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡಿಗರ ಹಬ್ಬ. ಹಾಗಾಗಿ ತಾಲ್ಲೂಕಿನ ಎಲ್ಲ ಕಡೆಗಳಿಂದಲೂ ಸಾಹಿತ್ಯ ಪ್ರೇಮಿಗಳು ಹರಿದುಬರಬೇಕು. ಸಮ್ಮೇಳನದ ಯಶಸ್ಸಿಗೆ ಸಮಾಜದ ಎಲ್ಲ ವರ್ಗದ ಜನರೂ ಸಹಕರಿಸಬೇಕು ಎಂದು ಹೇಳಿದರು.
ತಾಲ್ಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಎಂ.ಬೈರೇಗೌಡ, ಶ್ರೀರಾಮೇಗೌಡ, ಜಿ.ವಿ.ಚಂದ್ರಪ್ಪ, ಕಲಾ ಶಂಕರ್, ಆರ್.ರವಿಕುಮಾರ್, ನಟರಾಜ್, ಅನಿಲ್ ಕುಮಾರ್, ಚಂದ್ರಶೇಖರ್, ಮುರಳಿ, ಬಾಬು, ಕೃಷ್ಣಮೂರ್ತಿ ಸುಧಾಕರ್, ವೆಂಕಟರವಣ, ಸುಬ್ರಮಣ ಇದ್ದರು.