

ಶ್ರೀನಿವಾಸಪುರ : ಕಾರ್ಯನಿರ್ವಹಿಸುವ ಕಚೇರಿಯು ಸುಸಜ್ಜಿತವಾದ ಕಟ್ಟಡ ಇರಬೇಕು, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತ ಅಲ್ಮೇರಾ , ಅತ್ಯುತ್ತಮ ಗುಣಮಟ್ಟದ ಮೊಬೈಲ್ ಪೋನ್, ಸಿಮ್ ಮತ್ತು ಡೇಟಾ, ಗೋಗಲ್ ಕ್ರೋಮ್ ಬುಕ್ / ಲ್ಯಾಪ್ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಹಾಗೂ ರಾಜಾ ದಿನಗಳಲ್ಲಿ ಕಚೇರಿ ಯ ಕೆಲಸಗಳು ಬಗ್ಗೆ ಬತ್ತಡ ನೀಡುತ್ತಿರುವ ಬಗ್ಗೆ ಇಲಾಖಾ ಮನವಿ ಸಲ್ಲಿಸುರುವಂತೆ ಇಲಾಖೆಯ ಅನೇಕ ಹಲವಾರು ಬೇಡಿಕೆಗಳನ್ನು ಇಲಾಖೆಗೆ ಗಮನಕ್ಕೆ ತರುವಂತೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ರವರಿಗೆ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಸ್. ವಿ.ಜನಾರ್ಧನ್ ಮನವಿ ಮಾಡಿದ್ದಾರೆ
ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷ ಎಂ.ಎನ್. ಶಂಕರ್ ಹಾಗೂ ಎಲ್ಲಾ ಕಂದಾಯ ಇಲಾಖೆ ಪದಾಧಿಕಾರಿಗಳು, ಸಂಘದ ಸದಸ್ಯರು ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ತಹಶೀಲ್ದಾರ್ ಜಿ.ಎನ್.ಸುದೀಂದ್ರರವರಿಗೆ ಕಂದಾಯ ಸಚಿವರಿಗೆ ತಲುಪಿಸುವಂತೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘದವತಿಯಿಂದ ಸಮಸ್ಯೆಗಳ ಹಾಗು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿನಾಂಕ:೨೨-೦೯-೨೦೨೪ ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗ ದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಯಿತು. ಸದರಿ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ೩೧ ಜಿಲ್ಲೆಯ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು. ತಾಲ್ಲೂಕು ಅಧ್ಯಕ್ಷರು. ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಇದೇ ಸಮಯದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಶಾಂತಿಯುತವಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.
