ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆ.20 ರಂದು, ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ರವಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್, ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ್, ಚಂದ್ರಮೌಳಿ ಮತ್ತಿತರರು ಇದ್ದರು.