ಶ್ರೀನಿವಾಸಪುರ: ಸ್ವಾತಂತ್ರ್ಯ ಯೋಧರ ಸ್ಮರಣೆಯೊಂದಿಗೆ ದೇಶ ಕಟ್ಟುವ ಕಾರ್ಯ ನಡೆಯಬೇಕು : ಜಿಲ್ಲಾಧಿಕಾರಿ ವೆಂಕಟ್ ರಾಜಾ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸ್ವಾತಂತ್ರ್ಯ ಯೋಧರ ಸ್ಮರಣೆಯೊಂದಿಗೆ ದೇಶ ಕಟ್ಟುವ ಕಾರ್ಯ ನಡೆಯಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ತಲೆಮಾರು, ಭಾರತೀಯ ಸಂಸ್ಕøತಿಯಿಂದ ದೂರ ಸರಿಯುತ್ತಿದೆಎಂದು ಹೇಳಿದರು.
ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಬಲಿದಾನದ ಫಲ. ಅವರ ಹೋರಾಟ ವ್ಯರ್ಥವಾಗದಂತೆ ಎಚ್ಚರ ವಹಿಸಬೇಕಾಗಿದೆ. ಪ್ರತಿಯೊಬ್ಬರೂ ಸ್ವಾತಂತ್ರ್ಯ ರಕ್ಷಣೆಗೆ ಪೂರಕವಾಗಿ ನಡೆದುಕೊಳ್ಳಬೇಕಾಗಿದೆ. ಸ್ವಾತಂತ್ರ್ಯದ ಸವಿ ನಿರಂತರವಾಗಿ ಉಳಿಯಬೇಕಾಗಿದೆ ಎಂದು ಹೇಳಿದರು.
ಲೇಖಕ ಅಜಿತ್ ಶೆಟ್ಟಿ ಹರಂಜೆ ಭಾರತ ಸ್ವಾತಂತ್ರ್ಯದ ಸಂಗ್ರಾಮ ಕುರಿತು ಮಾತನಾಡಿದರು.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ತಹಶೀಲ್ದಾರ್ ಶಿರಿನ್ ತಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ನಾರಾಯಣಸ್ವಾಮಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ಸುಬ್ರಮಣಿ, ಪದ್ಮಾವತಿ ಇದ್ದರು.
ಮೆರವಣಿಗೆ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಬೆಳ್ಳಿ ರಥದಲ್ಲಿ ಭುವನೇಶ್ವರಿ ಮೆರವಣಿಗೆ ಏರ್ಪಡಿಸಲಾಗಿತ್ತು. ಮೆರವಣಿಗೆಯಲ್ಲಿ ತೂಪಲ್ಲಿ ಬಸವರಾಜು ತಂಡದಿಂದ ಚಕ್ಕೆ ಕೋಲಾಟ, ವಿ.ವಿನಯ್ ಮತ್ತು ತಂಡದಿಂದ ನಾದಸ್ವರ ವಾದನ, ಹೊದಲಿ ನಾರಾಯಣಸ್ವಾಮಿ ತಂಡದಿಂದ ತಮಟೆ ವಾದನ ಏರ್ಪಡಿಸಲಾಗಿತ್ತು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸ್ವಾತಂತ್ರ್ಯ ಯೋಧರ ವೇಷ ಭೂಷಣ ತೊಟ್ಟು ಗಮನ ಸೆಳೆದರು. ಭೈರವೇಶ್ವರ ವಿದ್ಯಾ ನಿಕೇತ£ನದ ವಿದ್ಯಾರ್ಥಿನಿಯರು ದೇಶ ಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಮನ ಗೆದ್ದರು
.