

ಶ್ರೀನಿವಾಸಪುರ : ಈ ಹಿಂದೆ ಎಂದು ಕೇಳದ ರೀತಿಯಲ್ಲಿ ಪಟ್ಟಣದಲ್ಲಿ ಶಾಂತಿ ,ನೆಮ್ಮದಿ ನೆಲಸಲು ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಬೇಕೆಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಮನವಿ ಮಾಡಿದರು.
ಪಟ್ಟಣ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಗುರುವಾರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಲಕ್ಷ ದೀಪೋತ್ಸವ ಸಮಿತಿ ಹಾಗೂ ಭಕ್ತಮಂಡಲಿ ವತಿಯಿಂದ 25 , ಶನಿವಾರ ರಂದು ಹಮ್ಮಿಕೊಂಡಿರುವ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಪೂರ್ವ ಬಾವಿ ಸಭೆಯಲ್ಲಿ ಮಾತನಾಡಿದರು.
ಅಡ್ಡಗಲ್ ಕ್ಷೇತ್ರದ ಕೋಮುಲ್ ನಿರ್ದೇಶಕ ಕೆ.ಕೆ.ಮಂಜುನಾಥ್ ಮಾತನಾಡಿ 25 ಶನಿವಾರ ದಂದು ಕಾರ್ತಿಕ ಮಾಸದ ಅಂಗವಾಗಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಂಡು ಸಾಯಂಕಾಲ ಶ್ರೀ ಲಕ್ಷಿನರಸಿಂಹಸ್ವಾಮಿ ಉತ್ಸವ ಮೂರ್ತಿಗಳ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲ ಪಕ್ಷಬೇದ ಮರೆತು ಎಲ್ಲಾ ನಾಗರೀಕರು ಭಾಗವಹಿಸಿ ದೇವರಕೃಪೆಗೆ ಪಾತ್ರರಾಗಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ ,ಜಿ.ಪಂ. ಮಾಜಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಲಕ್ಷ ದೀಪೋತ್ಸವ ಸಮಿತಿ ಪದಾಧಿಕಾರಿಗಳಾದ ಬಾರ್ಕೃಷ್ಣೇಗೌಡ, ಸತ್ಯನಾರಾಯಣ, ಥಿಯೇಟರ್ ಲಕ್ಷ್ಮಣರೆಡ್ಡಿ, ಪುರಸಭೆ ಸದಸ್ಯರಾದ ಎನ್ಎನ್ಆರ್ ನಾಗರಾಜ್, ನಾಮಿನಿ ಸದಸ್ಯರಾದ ಶಿವರಾಜ್, ಹೇಮಂತ್ಕುಮಾರ್, ನರಸಿಂಹಮೂರ್ತಿ ಇದ್ದರು.

