

ಶ್ರೀನಿವಾಸಪುರ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಶ್ರೀಮತಿ ಅನಿತಾ ಕೌಲ್ ಸ್ಮರಣಾರ್ಥವಾಗಿ ಬೆಂಗಳೂರು ನಗರದ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಐವರು ಶಿಕ್ಷಕರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.
ತಾಲ್ಲೂಕಿನ ಶಿವಪುರ ಶಾಲೆಯ ಸಹಶಿಕ್ಷಕ ಎನ್.ಎ. ಹನುಮಂತಪ್ಪ, ತಾಡಿಗೋಳ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ರಜನಿ ಜೆ.ಎಸ್., ಸೋಮಯಾಜನಹಳ್ಳಿ ಕೆಪಿಎಸ್ ಶಾಲೆಯ ಸಹಶಿಕ್ಷಕಿ ಅರುಣ ಕುಮಾರಿ ವಿ., ಆರಿಕುಂಟೆ ಪ್ರೌಢಶಾಲೆಯ ಸಹಶಿಕ್ಷಕಿ ರತ್ನಮ್ಮ ಬಿ.ಜಿ. ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಶ್ರೀನಿವಾಸಪುರ ತಾಲ್ಲೂಕಿನ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷ ಗೋಪಿನಾಥ್ ಜೆ., ಶಿಕ್ಷಕರ ಸಾಧನೆಗೆ ಅಭಿನಂದನೆ ಸಲ್ಲಿಸಿ, ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವರ ಕೊಡುಗೆ ಶ್ಲಾಘನೀಯವಾಗಿದೆ ಎಂದು ಹೇಳಿದರು.
ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಈ ಗೌರವ ಮತ್ತಷ್ಟು ಪ್ರೇರಣೆಯಾಗಲಿದೆ ಎಂದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ.

