

algolist: 0;
multi-frame: 0;
brp_mask:0;
brp_del_th:null;
brp_del_sen:null;
motionR: 0;
delta:1;
bokeh:1;
module: photo;hw-remosaic: false;touch: (0.27435166, 0.6385566);sceneMode: 4194304;cct_value: 0;AI_Scene: (-1, -1);aec_lux: 248.60596;aec_lux_index: 0;albedo: ;confidence: ;motionLevel: 0;weatherinfo: null;temperature: 38;
ಶ್ರೀನಿವಾಸಪುರ : ಸರ್ಕಾರವು ದೇಶದಲ್ಲಿನ ಪ್ರತಿಯೊಬ್ಬ ನಾಗರೀಕನು ಅಕ್ಷರಸ್ಥನ್ನಾಗಿಸುವ ಉದ್ದೇಶದಿಂದ ಹೆಚ್ಚು ಹೆಚ್ಚು ಉಪಯುಕ್ತ ಯೋಜನೆಗಳ ಮೂಲಕ ಅನುದಾನಗಳನ್ನು ಬಿಡುಗಡೆ ಮಾಡುತ್ತಿದ್ದು , ಅವುಗಳನ್ನು ಮಕ್ಕಳ ಸರ್ವತೋಮುಖ ಅಭಿವೃದ್ದಿಗಾಗಿ ಉಪಯೋಗಿಸುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲಹೆ ನೀಡಿದರು.
ಪಟ್ಟಣದ ಪ್ರಥಮಧರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಗಾಟಿಸಿ ಮಾತನಾಡಿದರು.
ಈಗಾಗಲೇ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ. ಅದರಂತೆ ಪ್ರತಿವರ್ಷದಂತೆ ಈ ಬಾರಿಯೂ ಸಹ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಮ್ಮ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಉತ್ತಮ ಸಾಧನೆಯಾಗಿದ್ದು, ಈ ಸಾಧನೆಗೆ ಕಾರಣಕರ್ತರಾದ ಶಿಕ್ಷಕರನ್ನು ಹಾಗು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ನಾನು ನಿಮಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಸದಾ ಸಿದ್ದನಿದ್ದೇನೆ ಎಂದರು.
ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ಕ್ರೀಡೆಗಳಲ್ಲಿ ಜಯಶೀಲರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ಹಾಗು ಬಹುಮಾನಗಳನ್ನು ವಿತರಿಸಿಲಾಯಿತು. ಪ್ರಾಂಶುಪಾಲ ಸಣ್ಣೀರಯ್ಯ, ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್, ಪ್ರಾದ್ಯಾಪಕರಾದ ಡಾ. ಮೃಂತ್ಯುಜಯ, ಡಾ. ಶಾರದಮಮ್ಮ, ಡಾ.ಪುಷ್ಪ, ಡಾ.ದಿನೇಶ್, ವೇದಶ್ರೀ, ರತ್ನಮ್ಮ, ಶುಭವತಿ, ಕಾವ್ಯ, ಶ್ಯಾಮಲ, ವ್ಯವಸ್ಥಾಪಕ ವಿಜಯ್ಕುಮಾರ್ ಇದ್ದರು.

