ಶ್ರೀನಿವಾಸಪುರ: ಉತ್ತಮ ಆರೋಗ್ಯಕ್ಕಾಗಿ ಪರಿಸರ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು : ಡಾ. ಕೆ.ಎನ್.ವೇಣುಗೋಪಾಲ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಉತ್ತಮ ಆರೋಗ್ಯಕ್ಕಾಗಿ ಪರಿಸರ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.
ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣ ಸ್ವಚ್ಛತಾ ಕಾರ್ಯಕ್ರಮವನ್ನು ಮಂಗಳವಾರ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ್ ಅಭಿಯಾನ ವರದಾನವಾಗಿದೆ. ಪ್ರಧಾನಿ ಮೋದಿ ಅವರ ನೆಚ್ಚಿನ ಕಾರ್ಯಕ್ರಮಗಳಲ್ಲಿ ಒಂದಾದ ಈ ಅಭಿಯಾನ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಬೆಳೆಯಲಾಗಿದ್ದ ಕಳೆ ಗಿಡಗಳನ್ನು ಕಿತ್ತು ಸ್ವಚ್ಛಗೊಳಿಸಲಾಯಿತು. ವಿವಿಧ ಜಾತಿಯ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು.
ಮುಖಂಡರಾದ ಜಯರಾಮರೆಡ್ಡಿ, ಎ.ಅಶೋಕ್ ರೆಡ್ಡಿ, ಕೆ.ನಾಗರಾಜಪ್ಪ, ಕೊಟ್ರಗುಳಿ ನಾರಾಯಣಸ್ವಾಮಿ, ರಾಮಾಂಜಿ, ವಿನೋದ್ ಕುಮಾರ್, ರಾಜೇಶ್, ರಮೇಶ್, ಶಿವಶಂಕರೇಗೌಡ ಇದ್ದರು.