ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ವಾಲ್ಮೀಕಿ ಸಮುದಾಯದ ಮುಖಂಡರು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಾಂಘಿಕ ಪ್ರಯತ್ನ ಮಾಡಬೇಕು. ಭಿನ್ನಾಭಿಪ್ರಾಯಕ್ಕೆ ಎಡೆಗೊಡದೆ ಸಮುದಾಯದ ಹಿತಕ್ಕಾಗಿ ಶ್ರಮಿಸಬೇಕು ಎಂದು ಸಮಾಜ ಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಹೇಳಿದರು.
ತಾಲ್ಲೂಕಿನ ಮ್ಯಾಕಲಗಡ್ಡ ಗ್ರಾಮದ ಸಮೀಪ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ತಾಲ್ಲೂಕಿನ ವಾಲ್ಮೀಕಿ ಸಮುದಾಯದ ಜನರು ಒಂದೆಡೆ ಸೇರಲು ಹಾಗೂ ಸಭೆ ಸಮಾರಂಭ ನಡೆಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಭವನ ನಿರ್ಮಿ ಸಲಾಗುತ್ತಿದೆ. ಯಾವುದೇ ಸಮುದಾ ಯದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮ ಬೆಂಬಲಿಸ ಲಾಗುವುದು. ಅಗತ್ಯವಾದ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು.
ಈಗಾಗಲೇ ಮಂದಿರ, ಮಸೀದಿ ಅಭಿವೃದ್ಧಿ, ಅಪಘಾತದಲ್ಲಿ ಮೃತರಾದ ಚಾಲಕರು, ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಬಡವರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಆನಂದ್ ಕುಮಾರ್ ಮಾತನಾಡಿ, ಸಮುದಾಯ ದಾನಿಗಳು ನೀಡುವ ನೆರವು ಸದುಪಯೋಗಪಡಿಸಿಕೊಳ್ಳಬೇಕು. ಮುಖ್ಯವಾಗಿ ಶೈಕ್ಷಣಿಕ ಪ್ರಗತಿಗೆ ಮೊದಲ ಅದ್ಯತೆ ನೀಡಬೇಕು. ಇದೇ ಮೊದಲ ಬಾರಿಗೆ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಹೊರಗಿನ ನೆರವು ಸಿಗುತ್ತಿರುವುದು ಸಂತೋಷದ ಸಂಗತಿ ಎಂದು ಅವರು ಹೇಳಿದರು.
ಸ್ಥಳೀಯ ಜಾನಪದ ಕಲಾವಿದರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಹರೀಶ್ ನಾಯಕ್, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್, ಮುಖಂಡರಾದ ರಾಜಶೇಖರರೆಡ್ಡಿ, ಕೃಷ್ಣಪ್ಪ, ನರಸಿಂಹಯ್ಯ, ಪೋಸ್ಟ್ ವೆಂಕಟರವಣಪ್ಪ, ನಿರ್ಮಲ ಜ್ಯೋತಿ, ಆನಂದ್ ಉನಕಿಲಿ. ಬೈರಪ್ಪ.ಸುನೀಲ್.ಶ್ರೀರಾಮ್.ಜಾವೀದ್. ಶಂಷೀರ್. ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ