![](https://jananudi.com/wp-content/uploads/2025/02/Screenshot-946-1.png)
![](https://jananudi.com/wp-content/uploads/2025/02/6svp1ep-1.jpg)
ಶ್ರೀನಿವಾಸಪುರದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶ್ರೀನಿವಾಸಪುರ: ಗ್ರಾಮ ಆಡಳಿತಾಧಿಕರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಸಾಂಘಿಕ ಪ್ರಯತ್ನ ನಡೆಸಬೇಕು. ಸರ್ಕಾರದ ಮೇಲೆ ಒತ್ತಡ ತಂದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದು ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಎನ್.ಶಂಕರ್ ಹೇಳಿದರು.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಈ ಹಿಂದೆ ಗ್ರಾಮಾಭಿವೃದ್ಧಿ ಅಧಿಕಾರಿಗಳ ಸಮಸ್ಯೆಗಳನ್ನು ಈಡೇರಿಸುವ ಭರವಸೆ ನೀಡಿತ್ತಾದರೂ, ಇದುವರೆಗೂ ಭರವಸೆ ಈಡೇರಿಲ್ಲ. ಆದ್ದರಿಂದ ಈಗ ರಾಜ್ಯವಾಪಿಯಾಗಿ ಎರಡನೇ ಹಂತದ ಮುಷ್ಕರ ನಡೆಸಲು ಉದ್ದೇಶಿಸಲಾಗಿದೆ. ಅದಕ್ಕೆ ಎಲ್ಲ ಗ್ರಾಮಾಧಿಕಾರಿಗಳೂ ಸಹಕರಿಸಬೇಕು ಎಂದು ಹೇಳಿದರು.
ಅಧ್ಯಕ್ಷ ಎಂ.ಎನ್.ಶಂಕರ್, ಉಪಾಧ್ಯಕ್ಷ ಎಂ.ಎನ್.ಹರೀಶ್, ಕಾರ್ಯದರ್ಶಿ ಎನ್.ಮುರಳಿ, ಖಜಾಂಚಿ ಆದರ್ಶ ಹಾಗೂ ಗ್ರಾಮಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.