

ಶ್ರೀನಿವಾಸಪುರ: ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಸೆ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಭೆ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ತಿಳಿಸಿದ್ದಾರೆ.
ಸಭೆಯಲ್ಲಿ ಗ್ರಾಹಕರೊಂದಿಗೆ ಸಂವಾದ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು. ಗಣೇಶ ವಿಗ್ರಹ ಪ್ರತಿಷ್ಠಾಪನಾ ಸ್ಥಳಗಳಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.