

ಶ್ರೀನಿವಾಸಪುರ : ಸರ್ಕಾರದಿಂದ ಬಂದತಹ ಅನುದಾನಗಳನ್ನು ಯಾವ ಯಾವ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಲಾಗಿದೆ ಹಾಗು ಬಾಕಿ ಇರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿಗಳಿಗೆ ತಾಲೂಕಿನ ನೋಡಲ್ ಅಧಿಕಾರಿಗಳಾದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿ.ಪಂ. ಉಪಕಾರ್ಯದರ್ಶಿ ಡಾ.ಎನ್.ಭಾಸ್ಕರ್ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಮಂಗಳವಾರ ತಾಲೂಕಿನ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಇಒ ಎಸ್.ಶಿವಕುಮಾರಿ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿದ್ದರು.