ಶ್ರೀನಿವಾಸಪುರ: ಪಟ್ಟಣದ ಪುರಸಭಾ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಗಾಂಧೀ ಜಯಂತಿ ಹಾಗೂ ಸ್ವಚ್ಛತಾ ಇ-ಸೇವೆಯ ಅಭಿಯಾನದ ಅಂಗವಾಗಿ ಪಟ್ಟಣದ ಸರ್ಕಾರಿ ಶಾಲೆಗಳ ಮಕ್ಕಳಿಂದ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಕಲಾಕೃತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಪುರಸಭಾ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಕಚೇರಿ ವ್ಯವಸ್ಥಾಪಕ ಜಿ.ನವೀನ್ ಚಂದ್ರ, ಕಂದಾಯ ಅಧಿಕಾರಿ ವಿ.ನಾಗರಾಜು, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಬಿಐಆರ್ಟಿಇ ಅಧಿಕಾರಿ ಜಿ.ವಿ.ಚಂದ್ರಪ್ಪ, ಪುರಸಭೆ ಕಚೇರಿಯ ಸಿಬ್ಬಂದಿ ಹಾಗೂ ಸರ್ಕಾರಿ ಶಾಲೆಗಳ ಶಾಲಾ ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.