ಶ್ರೀನಿವಾಸಪುರ: ತ್ಯಾಜ್ಯ ಮುಕ್ತ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು. ಸ್ವಚ್ಛ ಪರಿಸರ ನಿರ್ಮಾಣ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಕಾಲೇಜಿನ ಉಪ ಪ್ರಾಂಶುಪಾಲ ಶ್ರೀಧರ್ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾಥಿನಿಯರಿಂದ ಶನಿವಾರ ಏರ್ಪಡಿಸಿದ್ದ ತ್ಯಾಜ್ಯ ಮುಕ್ತ ಭಾರತ ಕುರಿತು ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದ ಅವರು, ತ್ಯಾಜ್ಯ ಮುಕ್ತ ಭಾರತ ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ತ್ಯಾಜ್ಯ ಆರೋಗ್ಯ ಸಮಸ್ಯೆಗೆ ಮೂಲ ಕಾರಣವಾಗಿದೆ. ವಿವಿಧ ಮೂಲಗಳಿಂದ ಹೊರಬೀಳುವ ತ್ಯಾಜ್ಯ ಅಗಾಧ ಪ್ರಮಾಣದ್ದಾಗಿದ್ದು, ನಿರ್ವಹಣೆ ಕಷ್ಟದಾಯಕ. ಆದ್ದರಿಂದ ವಿದ್ಯಾವಂತ ಸಮುದಾಯ ತ್ಯಾಜ್ಯ ನಿರ್ವಹಣೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಅದರಲ್ಲೂ ಈ ವಿಷಯದಲ್ಲಿ ವಿದ್ಯಾರ್ಥಿನಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಎಂ.ಬೈರೇಗೌಡ ಮಾತನಾಡಿ, ಬದಲಾದ ಪರಿಸ್ಥಿತಿಯಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಿದೆ. ಸಾರ್ವಜನಿಕರು ತ್ಯಾಜ್ಯ ವಸ್ತುಗಳ ನಿರ್ವಣೆ ಮಾಡುವಲ್ಲಿ ಅಗತ್ಯ ಎಚ್ಚರಿಕೆ ವಹಿಸುತ್ತಿಲ್ಲ. ಹಾಗಾಗಿ ಪರಿಸರ ತ್ಯಾಜ್ಯಮಯವಾಗಿದೆ. ಆದ್ದರಿಂದ ಪಟ್ಟಣದ ನಾಗರಿಕರು ತಮ್ಮ ನೆಗಳಲ್ಲಿ ಬೀಳುವ ತ್ಯಾಜ್ಯವನ್ನು ವಿಂಗಡಿಸಿ ಪೌರಕಾಮರ್ಿಕರಿಗೆ ನೀಡಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ವಸ್ತುಗಳನ್ನು ಸುಡಬಾರದು ಎಂದು. ಹಾಗೆ ಮಾಡುವುದರಿಂದ ಪರಿಸರಕ್ಕೆ ಹೆಚ್ಚಿನ ಹಾನಿ ಉಂಟಾಗುತ್ತದೆ ಎಂದು ಹೇಳಿದರು.
ತಾಲ್ಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ, ಶಿಕ್ಷಕಿ ಶಾರದಮ್ಮ ಇದ್ದರು.