ಶ್ರೀನಿವಾಸಪುರ : ಗ್ರಾಮಪಂಚಾಯಿತಿಯಲ್ಲಿ ಒಟ್ಟು 19 ಸದಸ್ಯರಿದ್ದು, ಅದರಲ್ಲಿ 13 ಸದಸ್ಯರು ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಗೀತಾಶ್ರೀನಿವಾಸ್ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಿದೇವಮ್ಮ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದರು .ಇದರ ಹಿನ್ನೆಯಲ್ಲಿ ಗೀತಾಶ್ರೀನಿವಾಸ್, ಲಕ್ಷ್ಮಿದೇವಮ್ಮ ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆಂದು ಚುನಾವಣಾಧಿಕಾರಿ ಸುಬಾನ್ ಘೋಷಿಸಿದರು.
ನೂತನ ಅಧ್ಯಕ್ಷೆ ಗೀತಾ ಶ್ರೀನಿವಾಸ್ ಮಾತನಾಡಿ ನಮ್ಮ ಪಕ್ಷದ ಹಿರಿಯರ ಗ್ರಾ.ಪಂ ಸದಸ್ಯರ ಸಲಹೆ, ಸಹಕಾರವನ್ನು ಪಡೆದು ಕಾಲ ಕಾಲಕ್ಕೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಿ, ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆ ಮಾಡಲಾಗುವುದು ಎಂದರು.
ಪಿಡಿಒ ಗೋಪಾಲರೆಡ್ಡಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್, ಮುಖಂಡರಾದ ಮ್ಯಾಕಲ ನಾರಾಯಣಸ್ವಾಮಿ, ಶ್ರೀನಿವಾಸರೆಡ್ಡಿ, ನಾಗೇಶ್ ಇದ್ದರು.