ಶ್ರೀನಿವಾಸಪುರ: ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣನ ಭಾವಚಿತ್ರ ಮೆರವಣಿಗೆ ಏರ್ಪಡಿಸಲಾಗಿತ್ತು.
ಮೆರವಣಿಗೆ ಮುಂಚೂಣಿಯಲ್ಲಿ ಶ್ರೀಕೃಷ್ಣನ ಭಾವಚಿತ್ರ ಹೊತ್ತ ಎತ್ತಿನ ಗಾಡಿ ಇದ್ದರೆ, ಹಿಂದೆ ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ಕೃಷ್ಣನ ಮೂರ್ತಿ ಹೊತ್ತು ಬಂದಿದ್ದ ಹತ್ತಾರು ಬೆಳ್ಳಿ ರಥಗಳು ಸಾಗಿದ್ದವು.
ಮೆರವಣಿಗೆ ಉದ್ದಕ್ಕೂ ಡೊಳ್ಳು ಕುಣಿತ, ಪಟ ಕುಣಿತ, ಪಂಢರಿ ಭಜನೆ, ಕೋಲಾಟ, ನವಿಲು ಕುಣಿತ ಮುಂತಾದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆದವು. ಸಮಾಜದ ಎಲ್ಲ ಸಮುದಾಯದ ಜನರೂ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ತಾಲ್ಲೂಕು ಯಾದವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಯ್ಯಪ್ಪ, ಕಾರ್ಯದರ್ಶಿ ಕೆ.ವಿ.ಗೋವಿಂದಪ್ಪ, ಖಜಾಂಚಿ ಚಿನ್ನಪ್ಪಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್ ಮುಖಂಡರಾದ ಪುರಸಭಾ ದಸಸ್ಯ ಅಪ್ಪೂರು ರಾಜು, ಮುಖಂಡರಾದ ಬಾಲಾಜಿ, ಆನಂದ್, ಆದಿನಾರಾಯಣಪ್ಪ, ರಾಧಾಕೃಷ್ಣ, ಜ£ಗನ್ನಾಥ್, ಕೃಷ್ಣಮೂರ್ತಿ ಇದ್ದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ತಹಶೀಲ್ದಾರ್ ಶಿರಿನ್ ತಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಉಪ ತಹಶೀಲ್ದಾರ್ ಬಲರಾಮಚಂದ್ರೇಗೌಡ, ಶಿರಸ್ತೇದಾರ್ ಮನೋಹರ ಮಾನೆ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಇದ್ದರು.
ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಮುಖ್ಯಾಧಿಕಾರಿ ಎಂ.ಜಯರಾಂ ಹಾಗೂ ಸಿಬ್ಬಂದಿ ಇದ್ದರು.