ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪೂರಕವಾಗಿ ಯೋಜನೆ ರೂಪಿಸಿ ಜಾರಿಗೆ ತರಬೇಕು:ರೇವಣ ಸಿದ್ದಯ್ಯ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪೂರಕವಾಗಿ ಯೋಜನೆ ರೂಪಿಸಿ ಜಾರಿಗೆ ತರಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರೇವಣ ಸಿದ್ದಯ್ಯ ಹೇಳಿದರು.
ಪಟ್ಟಣದ ಬಿಆರ್‍ಸಿ ಕೆಂದ್ರಕ್ಕೆ ಶನಿವಾರ ಭೇಟಿ ನೀಡಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ತಾಲ್ಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಬಿಟ್ಟುಕೊಟ್ಟಿಲ್ಲ. ಈ ಬಾರಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಹೇಳಿದರು.
ಕೋವಿಡ್ ಸಂಕಷ್ಟದ ನಡುವೆಯೂ ಶಿಕ್ಷಕರು ನಿಯಮಾನುಸಾರ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು ಅವರಿಗೆ ಅಗತ್ಯವಾದ ಮಾರ್ಗದರ್ಶನ ನೀಡುತ್ತಿದ್ದಾರೆ. ಪರೀಕ್ಷಾ ಪೂರ್ವಕವಾಗಿ ಪೂರಕ ಸಾಹಿತ್ಯ ಹಾಗೂ ಸಲಹೆ ನೀಡಲಾಗುತ್ತಿದೆ. ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಬಿಆರ್‍ಸಿ ಕೆ.ಸಿ.ವಸಂತ, ಸಿಆರ್‍ಪಿಗಳಾದ ಕಲಾ ಶಂಕರ್, ವೇಣುಗೋಪಾಲ್, ವರದರೆಡ್ಡಿ, ಜಯರಾಮರೆಡ್ಡಿ, ಮೂರ್ತಿ, ಕೃಷ್ಣಮೂರ್ತಿ, ಪದ್ಮ, ನಟರಾಜ್, ನಾಗರಾಜ್, ಶೇಷಾದ್ರಿ, ಚೌಡರೆಡ್ಡಿ, ಹರೀಶ್, ರೆಡ್ಡಪ್ಪ, ಸುಜಾತ, ಮಮತ, ರಾಮಚಂದ್ರ, ಇಸಿಒಗಳಾದ ಅಮರನಾಥ್, ಹನುಮೇಗೌಡ, ಮಹೇಶ್, ಲಕ್ಷ್ಮೀನಾರಾಯಣ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಂ.ಬೈರೇಗೌಡ ಇದ್ದರು.