ಎಸ್​ಎಸ್​​ಎಲ್​​ಸಿ ಪರೀಕ್ಷೆ ಬರೆಯುತ್ತಿರುವಾಗಲೇ ಹೃದಯಾಘಾತ – ವಿದ್ಯಾರ್ಥಿನಿ ಸಾವು

JANANUDI.COM NETWORK


ಮೈಸೂರು, ಮಾ.28: :ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ‌‌ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ‌‌ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.