JANANUDI.COM NETWORK
ಬೆಂಗಳೂರು: ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಇಂದು ಮಧ್ಯಾಹ್ನ 3.30ಕ್ಕೆ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಶಿಕ್ಷಣ ಇಲಾಖೆ ಫಲಿತಾಂಶವನ್ನ ಪ್ರಕಟ ಮಾಡಿದೆ.
ಜುಲೈ 19 ಮತ್ತು 22ರಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 9ರಂದು ಪ್ರಕಟಿಸುವುದಾಗಿ ಪ್ರಾಥಮಿಕ
ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದರು.
ಈ ಬಾರಿ ಪರೀಕ್ಷೆಗೆ ರಾಜ್ಯದಲ್ಲಿ 8.72 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸ್ ಆಗುವ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದ್ದರು.
www.esslc.karnatakagovt.in, www.kseeb.kar.nic.in
ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ ಸಂಖ್ಯೆಯನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.
ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣಗಳಿಗೆ ಭೇಟಿ ನೀಡಿ ತಮ್ಮ ನೋಂದಾಣಿ ನಮೂದಿಸಿದ ನಂತರ ಫಲಿತಾಂಶ ಬರುತ್ತದೆ.
www.sslc.karnataka.gov.in, www.karresults.nic.in
www.results.gov.in.