

ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಈ ಬಾರಿ ಎಸ್.ಎಸ್.ಎಲ್.ಸಿಯಲ್ಲಿ ಶೇ.92.68 ಫಲಿತಾಂಶ ದಾಖಲುಗೊಂಡಿದೆ.
ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಯಲ್ಲಿ ಅಗ್ರಸ್ಥಾನದಲ್ಲಿ ಕುಮಾರಿ ಸುಜಾತ 555 ಪಡೆದಿದ್ದಾಳೆ. ಸಿಂಚನಾ 541, ಪ್ರತಿಭಾ 512, ಅನಘ 504 ಅಂಕ ಪಡೆದು ಸಾಧನೆ ಮಾಡಿದ್ದಾರೆ.ಶಾಲೆಯ ಒಟ್ಟು ಫಲಿತಾಂಶ ಎ ಗ್ರೇಡ್ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಚಾಲಕರೂ ಕುಂದಾಪುರ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂದನೀಯ ಫಾಲ್ ರೇಗೊ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅಸುಂಪ್ತಾ ಹಾಗೂ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.



