

ಕುಂದಾಪುರ ;ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆ ಹಾಗೂ ಸ್ಥಳೀಯ ಸಂಸ್ಥೆ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ (07-10-2026) ಸಂತ ಜೋಸೆಫರ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ಬೆಂಕಿ ಬಳಸಿ ವಿವಿಧ ಬಗೆಯ ಅಡುಗೆ ಸಿದ್ಧಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ವಹಿಸಿದ್ದರು. ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಗುಣ ರತ್ನ ಅವರು ಕಾರ್ಯಕ್ರಮ ಉದ್ಘಾಟಿಸಿ , ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ಅಡುಗೆಯನ್ನು ಕರಗತ ಮಾಡಿಕೊಂಡರೆ ಮುಂದಿನ ಜೀವನಕ್ಕೆ ಸಹಕಾರಿಯಾಗುವುದು ಎಂದರು. ಸ್ಥಳೀಯ ಸಂಸ್ಥೆಯ ಗೈಡ್ ಸಂಸ್ಥೆಯ ಕಾರ್ಯದರ್ಶಿ ಶಿಕ್ಷಕ ಪಿಯುಸ್ ಡಿಸೋಜಾ ಅವರು ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಶಿಕ್ಷಕಿ ರೇಷ್ಮಾ ಇವರು ಶುಭ ಹಾರೈಸಿದರು. ಶಾಲೆಯ ಗೈಡ್ ಶಿಕ್ಷಕಿ ಸೆಲೀನ್ ಇವರು ಸಹಕರಿಸಿದರು. ಕುಮಾರಿ ಆಯಿಷಾ ಆರೀಪ ಸ್ವಾಗತಿಸಿ, ಕುಮಾರಿ ಸನ್ವಿತಾ ವಂದಿಸಿ, ಕುಮಾರಿ ಶ್ರಾವಣಿ ಕಾರ್ಯಕ್ರಮ ನಿರೂಪಿಸಿದಳು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.































