

ಕುಂದಾಪುರ ; ದಿನಾಂಕ 01-06-2026 ರಂದು ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಉತ್ಸಾಹದಿಂದು ನಡೆಯಿತು. ಆ ಪ್ರಯುಕ್ತ ಶಾಲಾ ಕೊಠಡಿಗಳಿಗೆ ತಳಿರು ತೋರಣಗಳಿಂದ ಅಲಂಕರಿಸಲಾಯಿತು. ವಿದ್ಯಾರ್ಥಿಗಳನ್ನು ವಾದ್ಯ ವೃಂದದೊಂದಿಗೆ ಬರ ಮಾಡಿಕೊಡಲಾಯಿತು. ಶಾಲಾ ಸಭಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಸುಗುಣ ಇವರು ವಿದ್ಯಾರ್ಥಿಗಳಿಗೆ ಸರಕಾರ ಕೂಡ ಮಾಡಿದ ಉಚಿತ ಪಠ್ಯ ಪುಸ್ತಕಗಳನ್ನು ಹಾಗೂ ಎಂಸಿಸಿ ಬ್ಯಾಂಕ್ ಉಚಿತವಾಗಿ ನೀಡಿದ ನೋಟ್ಸ್ ಪುಸ್ತಕಗಳನ್ನು ವಿತರಿಸಿದರು. ನಂತರ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಪ್ರೇರಣೆಯ ಮಾತುಗಳನ್ನಾಡಿ ದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.










