ಸಂತ ಲಾರೆನ್ಸ್ ಸಂ. ಪ. ಪೂ. ಕಾಲೇಜು, ಮೂಡುಬೆಳ್ಳೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

JANANUDI.COM NETWORK

ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಡುಬೆಳ್ಳೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ. ಡಿಸೆಂಬರ್ 30ರಂದು ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮವು ಸಂತ ಲಾರೆನ್ಸ್ ಕಮ್ಯೂನಿಟಿ ಸಭಾಂಗಣದಲ್ಲಿ ಪೂರ್ವನ್ನ 10 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಜಾರ್ಜ್ ಡಿಸೋಜ ಅವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ1962 ರಿಂದ 1970 ತನಕದ ಎಸೆಸೆಲ್ಸಿ ಬ್ಯಾಚಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಿಸೋಜರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ