ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ

JANANUDI.COM NETWORK


ಕುಂದಾಪುರ: ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕುಂದಾಪುರ ವಲಯದ ಐದು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಅಲ್ಲದೇ ಪಾಸಿಂಗ್ ಪರ್ಸೆಂಟೇಜ್‍ನಲ್ಲಿ ಸಹ ಕುಂದಾಪುರ ಪ್ರಥಮ ಸ್ಥಾನದಲ್ಲಿದೆ ಎಂದು ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಎನ್.ಎಚ್.ನಾಗೂರ ಹೇಳಿದರು.
ಅವರು ಶುಕ್ರವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಭೇಟಿ ನೀಡಿ ಸರಕಾರ ಕೊಡಮಾಡಿದ ಉಚಿತ ಪಠ್ಯ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶ್ರದ್ಧೆ, ಭಕ್ತಿಯಿಂದ ಗುರುಗಳು ಹೇಳಿಕೊಟ್ಟ ಪಾಠವನ್ನು ಚೆನ್ನಾಗಿ ಅಭ್ಯಾಸ ಮಾಡಿ ಉತ್ತಮ ಅಂಕದೊಂದಿದೆ ಉತ್ತೀರ್ಣಗೊಂಡು ಶಾಲೆ,ಗುರು,ಹೆತ್ತವರ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಈ ಸಂದರ್ಭದಲ್ಲಿ ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್, ಎಆರ್‍ಪಿ ಶಂಕರ ಶೆಟ್ಟಿ ಉಪಸ್ಥಿತದ್ದರು.
ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ ಸ್ವಾಗತಿಸಿದರು. ಶಿಕ್ಷಕಿಯರಾದ ಸಿಸ್ಟರ್ ಚೇತನಾ, ಪ್ರೀತಿ ಪಾಯಸ್,ಸ್ಮಿತಾ ಡಿ ಸೋಜಾ ಸಹಕರಿಸಿದರು.ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.