JANANUDI.COM NETWORK

ಕುಂದಾಪುರ:ಸೋಮವಾರ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರವು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಜರುಗಿತು.
ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಮಿತಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು.ಆಶಾ ಕಾರ್ಯಕರ್ತೆ ಮಾಲತಿ ಸಹಕರಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಅಸುಂತಾ ಲೋಬೋ ಸ್ವಾಗತಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ವಂದಿಸಿದರು.