JANANUDI.COM NETWORK
ಕುಂದಾಪುರ, ಜು.23; ಸ್ಥಳ್ಳಿಯ ಹೆಸರಾಂತ ಕುಂದಾಪುರ ಸಂತ ಮೇರಿಸ್ ಪ.ಪೂ. ಕಾಲೇಜಿಗೆ 2020-21 ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಪಲಿತಾಂಶ ದೊರಕಿದೆ. ಒಟ್ಟು 87 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 11 ವಿದ್ಯಾರ್ತಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಕು,ವ್ಯಾಲಿನ್ ಬ್ರಗಾಂಜ ವಿಜ್ಞಾನ ವಿಭಾಗದಲ್ಲಿ 596 ಅಂಕದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ವಿಜ್ಞಾನ ವಿಭಾಗದ 06 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದ 05 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆಂದು, ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ರೇಶ್ಮಾ ಫೆರ್ನಾಂಡಿಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸಂಸ್ಥೆಯ ಆಡಳಿತ ಮಂಡಳಿಯ ಜೊಂಯ್ಟ್ ಸೆಕ್ರಟರಿ, ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಅಭಿನಂದಿಸಿದ್ದಾರೆ.