ಷ್ರೀನಿವಾಸಪುರ : 06-12-2024 ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|ಬಿ.ಆರ್.ಅಂಬೇಡ್ಕರ್ ರವರ 68 ನೇ ಪುಣ್ಯ ತಿಥಿ ಸಂಬಂಧ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುಲಾಗುವುದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಬುಧವಾರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
6-12-2024 ರಂದು ಬೆಳಗ್ಗೆ 9.00 ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|ಬಿ.ಆರ್.ಅಂಬೇಡ್ಕರ್ ರವರ 68 ನೇ ಪುಣ್ಯ ತಿಥಿ ಸಂಬಂಧ
ತಾಲ್ಲೂಕು ಕಛೇರಿಯ ಆವರಣದಲ್ಲಿರುವ ಡಾ|ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮಕ್ಕೆ ಶ್ರೀನಿವಾಸಪುರ ತಾಲ್ಲೂಕಿನ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗಣ್ಯ ವೃಪ್ತಿಗಳು, ಸಮುದಾಯದ ಮುಖಂಡರುಗಳು ಹಾಗೂ ಸದಸ್ಯರುಗಳು ಮತ್ತು ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ತಪ್ಪದೇ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಈ ಮೂಲಕ ಕೋರಿದರು.