

ಶ್ರೀನಿವಾಸಪುರ : ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಜೀವನದ ಗುರಿಯನ್ನು ಮುಟ್ಟುವಂತೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆ ನೀಡಿದರು.
ಪಟ್ಟಣದ ತ್ಯಾಗರಾಜ ಬಡವಾಣೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀನಿವಾಸಪುರ ಕ್ಲಸ್ಟರ್ ಕಲಿಕಾ ಹಬ್ಬವನ್ನು ಉದ್ಗಾಟಿಸಿ ಮಾತನಾಡಿದರು.
ಸರ್ಕಾರವು ಪ್ರತಿಯೊಬ್ಬ ಮಗುವು ಶಿಕ್ಷಣವನ್ನು ಪಡೆಯಲೇ ಬೇಕೆಂಬ ನಿಟ್ಟಿನಲ್ಲಿ ಅನೇಕ ಯೋಜನೆಗಳ ಮುಖಾಂತರ ಶಿಕ್ಷಣ ಪಡೆಯಲು ಪ್ರೋತ್ಸಾಹ ಮಾಡುತ್ತಿದೆ. ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು. ಶಿಸ್ತು, ಗುರಿಯೊಂದಿಗೆ ತಮ್ಮ ಜೀವನದ ಗುರಿಯನ್ನು ಮುಟ್ಟುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕಲಿಕೆ ನಿರಂತರವಾಗಿ ಇರಬೇಕು ಇದರೊಂದಿಗೆ ಉತ್ತಮ ಪರಿಶ್ರಮದೊಂದಿಗೆ ತಮ್ಮ ಗುರಿಯನ್ನು ಸಾಧಿಸುವಂತೆ ತಿಳಿಸಿದರು.
ಇಒ ಎಸ್.ಶಿವಕುಮಾರಿ ಮಾತನಾಡಿ ಇಂದಿನ ದಿನಗಳಲ್ಲಿ ಶಿಕ್ಷಣ ವ್ಯಾಪಾರಿ ಕರಣವಾಗಿದೆ. ಖಾಸಗಿ ಶಾಲೆಗಳು ನೀಡುವ ಆಸೆ, ಆಮೀಷಗಳಿಗೆ ಒಳಪಟ್ಟು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ ಆದರೆ ಸರ್ಕಾರಿ ಶಾಲೆಗಳಲ್ಲಿ ಪಾಠ ಮಾಡುವ ಶಿಕ್ಷಕರು ಮೌಲ್ಯಯುತ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾರೆ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಸೇರಿ ಸರ್ಕಾರ ನೀಡುವ ಉಚಿತ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾವಂತರಾಗುವಂತೆ ತಿಳಿಸಿದರು.
ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಅವರ ಸಾಮಥ್ರ್ಯಕ್ಕೆ ತಕ್ಕಂತೆ ಭೋದನೆ ಮಾಡಬೇಕು. ಪ್ರತಿ ವಿದ್ಯಾರ್ಥಿಗೆ ಓದಲು, ಬರೆಯಲು ಬರಬೇಕು ಕನಿಷ್ಟ ಶಿಕ್ಷಣವನ್ನು ಬರಬೇಕು ಎನ್ನುವುದೇ ಸರ್ಕಾರದ ಉದ್ದೇಶ . ಸರ್ಕಾರದ ಉದ್ದೇಶವನ್ನು ಸಕಾರಗೊಳಿಸಲು ಶಿಕ್ಷಕರು ಶ್ರಮವಹಿಸಬೇಕಾಗಿದೆ ಎಂದರು.
ಬಿಆರ್ಸಿ ಕೆ.ಸಿ.ವಸಂತ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಲೋಚನಾ, ಪುರಸಭೆ ವ್ಯವಸ್ಥಾಪಕ ನವೀನ್ ಚಂದ್ರ, ಎಸ್ಡಿಎಂಸಿ ಅಧ್ಯಕ್ಷ ಆನಂದರೆಡ್ಡಿ, ಇಸಿಒಗಳಾದ ಕೆ.ಸಿ.ಶ್ರೀನಿವಾಸ್, ಆರ್.ಸುಬ್ರಮಣಿ, ಬಿಐಇಆರ್ಟಿ ಜಿ.ವಿ.ಚಂದ್ರಪ್ಪ, ಬಿಆರ್ಪಿ ವೆಂಕಟಚಾಲಪತಿ, ಪುರಸಭೆ ಆರೋಗ್ಯ ಅಧಿಕಾರಿ ಸುರೇಶ್, ಸಿಆರ್ಪಿ ರಾಧಕೃಷ್ಣ, ಮುಖ್ಯ ಶಿಕ್ಷಕ ನಾರಾಯಣಸ್ವಾಮಿ ಇದ್ದರು.