ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಬುಧವಾರ ವಯೋನಿವೃತ್ತಿ ಹೊಂದಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಲ್.ಕೆ.ಶ್ರೀನಿವಾಸಮೂರ್ತಿ ಹೇಳಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಇಲಾಖೆ ಸಿಬ್ಬಂದಿ ಹಾಗೂ ನಾಗರಿಕರಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಿಕ್ಷಣ ಹೊರತು ಪಡಿಸಿ ಬದುಕು ಸಾಧ್ಯವಿಲ್ಲ ಎಂಬ ಅರಿವು ಇದ್ದುದರಿಂದಾಗಿ ತಾಂತ್ರಿಕ ಶಿಕ್ಷಣ ಪಡೆದು ಎಂಜಿಯರ್ ಆಗಲು ಸಾಧ್ಯವಾಯಿತು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಮ್ಮ ಕಾರ್ಯಭಾರವನ್ನು ನೂತನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್ ಅವರಿಗೆ ವಹಿಸಿದರು.
ಕೆ.ಸಿ.ವ್ಯಾಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೃಷ್ಣ, ಎಂಜಿನಿಯರ್ ಮುನಿರಾಜು ಇದ್ದರು.
