

ಶ್ರೀ ಮಜದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶಿರಸಿ ಇವರ ನೇತೃತ್ವದಲ್ಲಿ ಶ್ರೀ ಭಗವದ್ಗೀತಾ ಅಭಿಯಾನದಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಡೆದ ಭಗವದ್ಗೀತೆ ಕಂಠಪಾಠ ಸ್ಫರ್ಧೆಯಲ್ಲಿ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸಾಕ್ಷರ್ ಶೆಟ್ಟಿ ( 8ನೇ ತರಗತಿ ) ಹಾಗೂ ಅರ್ಥ( 5ನೇ ತರಗತಿ )ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .
ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ , ಮುಖ್ಯ ಶಿಕ್ಷಕರು , ಶಿಕ್ಷಕ ವೃಂದದವರು ಹಾಗೂ ಭೋದಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

