ಶ್ರೀನಿವಾಸಪುರ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕ್ರೀಡಾಸಕ್ತಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಲ್.ವಿ.ಗೋವಿಂದಪ್ಪ ಹೇಳಿದರು.
ತಾಲ್ಲೂಕಿನ ತಾಡಿಗೋಳ್ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ನೆಲವಂಕಿ ಹೋಬಳಿ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪಾರಿತೋಷಕ ವಿತರಿಸಿ ಮಾತನಾಡಿ, ಆಟೋಟಗಳಲ್ಲಿ ಉತ್ತಮ ಪ್ರದರ್ಶನ ಮುಖ್ಯವೇ ಹೊರತು ಸೋಲು ಗೆಲುವಲ್ಲ ಎಂದು ಹೇಳಿದರು.
ಕ್ರೀಡೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಮೂಡಿಸುತ್ತದೆ. ಮೇಲು ಕೀಳು ಭಾವನೆ ಅಳಿಸುತ್ತದೆ. ಸಮಾಜದಲ್ಲಿ ಸ್ನೇಹ, ಸೌಹಾರ್ಧತೆ ವೃದ್ಧಿಸುತ್ತದೆ. ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕುಎಂದು ಹೇಳಿದರು.
ತಾಡಿಗೋಳ್ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ವೆಂಕಟರವಣ, ಲಕ್ಷ್ಮೀಪುರ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್ ಇದ್ದರು.